fbpx
Have Any Questions? ab@agrifi.in
+91-7094111133

Startup for Farmers Loan:ಸಾಲ ಸಿಗದ ರೈತರ ಚಿಂತೆ ತಗ್ಗಿಸಲು ಬಂದಿದೆ ‘ಅಗ್ರಿ ಫೈ’ ಸ್ಟಾರ್ಟಪ್ [as covered in asianet suvarna]

*ಕೃಷಿ ಟ್ರೇಡರ್ಸ್‌ಗಳಿಗೆ ಸಾಲದ ನೆರವು ಒದಗಿಸಲಿದೆ ‘ಅಗ್ರಿ ಫೈ’
*ಆರ್ಥಿಕ ಮುಗ್ಗಟ್ಟು ಎದುರಿಸುತ್ತಿರೋ ರೈತರಿಗೆ ಸಾಲ ಸೌಲಭ್ಯ ಪಡೆಯಲು ನೆರವು
*ಕರ್ನಾಟಕ ಹಾಗೂ ತಮಿಳುನಾಡಿನಲ್ಲಿ ಈಗಾಗಲೇ ಕಾರ್ಯಾರಂಭ
* ‘ಅಗ್ರಿ ಫೈ’ ಅಗ್ರಿನ್ನೋವ್ ಟೆಕ್ನಾಲಜೀಸ್ ಪ್ರೈ.ಲಿ. ಕಂಪನಿ ಸ್ಥಾಪಿಸಿರೋ ಸ್ಟಾರ್ಟಪ್

ಬೆಂಗಳೂರು(ಡಿ.29): ದೇಶದ ಬೆನ್ನೆಲುಬು ಎನಿಸಿಕೊಂಡಿರುವ ರೈತನಿಗೆ(Farmer) ಸಾಲ(Loan) ನೀಡಲು ಬಹುತೇಕ ಬ್ಯಾಂಕುಗಳು(banks),ಹಣಕಾಸು ಸಂಸ್ಥೆಗಳು ಹಿಂದೆಮುಂದೆ ನೋಡುತ್ತವೆ. ಬರಗಾಲ, ಪ್ರವಾಹ, ಬೆಳೆಹಾನಿ ಹೀಗೆ ನಾನಾ ಕಾರಣಗಳಿಂದ ರೈತರು ಆಗಾಗ ಆರ್ಥಿಕ ಸಂಕಷ್ಟಗಳನ್ನು ಎದುರಿಸುತ್ತಲೇ ಇರುತ್ತಾರೆ. ಈ ರೀತಿ ಹಣಕಾಸಿನ ಮುಗ್ಗಟ್ಟು(Financial crisis) ಎದುರಿಸುತ್ತಿರೋ ರೈತರನ್ನು ಗುರುತಿಸಿ ಅವರಿಗೆ ಸಾಲ ಸೌಲಭ್ಯ ಕಲ್ಪಿಸಲು ‘ಅಗ್ರಿಫೈ’ (Agrifi) ಎಂಬ ಸ್ಟಾರ್ಟಪ್‌ (Startup) ಸಂಸ್ಥೆ ರಾಜ್ಯದಲ್ಲಿ ಕಾರ್ಯಾರಂಭಿಸಿದೆ.

ಏನಿದು ಅಗ್ರಿಫೈ?
ಕೃಷಿ ತಂತ್ರಜ್ಞಾನ ಕ್ಷೇತ್ರದಲ್ಲಿಯೇ ಕೆಲಸ ಮಾಡುತ್ತಿದ್ದ ಅಭಿಲಾಷ್ ತಿರುಪತಿ, ಕೆ.ಆರ್. ರಘುಚಂದ್ರ ಮತ್ತು ಮಿತಿಲೇಶ್ ಕುಮಾರ್ ಎಂಬುವವರು ಅಗ್ರಿನ್ನೋವ್ ಟೆಕ್ನಾಲಜೀಸ್ ಪ್ರೈ.ಲಿ. ಎಂಬ ಕಂಪನಿ ಸ್ಥಾಪಿಸಿ ಆ ಮೂಲಕ ‘ಅಗ್ರಿ ಫೈ’ (Agrifi) ಹೆಸರಿನಲ್ಲಿ ಕೃಷಿ ಕ್ಷೇತ್ರದ ಒಟ್ಟಾರೆ ಬೆಳವಣಿಗೆಗಾಗಿ ಸ್ಟಾರ್ಟಪ್ ಯೋಜನೆಗಳನ್ನು ರೂಪಿಸಿದ್ದಾರೆ. ಅಗ್ರಿ ಫೈ ಮೂಲಕ ಈಗಾಗಲೇ ಕರ್ನಾಟಕ(Karnataka),ತಮಿಳುನಾಡು(Tamilnadu) ಮತ್ತು ಕೇರಳದಲ್ಲಿ(Kerala)ಕೃಷಿ ಟ್ರೇಡರ್ಸ್‌ಗಳನ್ನು(Agriculture Traders) ಹುಡುಕಿ ಅವರಿಗೆ ಸಾಲದ ನೆರವು ಒದಗಿಸಲಾಗುತ್ತಿದೆ. ರೈತರಿಗೆ ಸಾಲಸೌಲಭ್ಯ ನೀಡುವಂತಹ ವ್ಯಾಪಾರಸ್ಥರಿಗೆ ಸಾಲಸೌಲಭ್ಯ ಒದಗಿಸಿ ಆ ಮೂಲಕ ಹೆಚ್ಚಿನ ರೈತರಿಗೆ ಸಾಲದ ನೆರವು ಒದಗಿಸಬೇಕು ಎಂಬುದು ಅಗ್ರಿಫೈ ಮುಖ್ಯ ಉದ್ದೇಶ.

ಸಾಲ ಬೇಕೆಂದರೆ ಏನು ಮಾಡಬೇಕು?
ನೀವು ಸಹ ಕೃಷಿ ಕ್ಷೇತ್ರದಲ್ಲಿ ಟ್ರೇಡರ್ಸ್ ಆಗಿದ್ದು, ನಿಮಗೂ ಸಾಲಸೌಲಭ್ಯ ಬೇಕಿದ್ದರೆ ನಿಮ್ಮ ಸ್ಮಾರ್ಟ್‌ಫೋನ್‌ನಲ್ಲಿ ಕೃಷಿ ಖಾತಾ (Krishi Khata) ಆ್ಯಪ್(App) ಡೌನ್‌ಲೋಡ್(download)ಮಾಡಿಕೊಳ್ಳಿ. ಅಲ್ಲಿ ಕೇಳಿರುವ ವಿವರಗಳನ್ನು ಭರ್ತಿ ಮಾಡುವ ಮೂಲಕ ಸಾಲಕ್ಕೆ ಅರ್ಜಿ ಸಲ್ಲಿಸಬಹುದು. ಅಗ್ರಿಫೈ ಕಡೆಯಿಂದ ನಿಮ್ಮ ದಾಖಲೆಗಳನ್ನು ಪರಿಶೀಲಿಸಿ ಬ್ಯಾಂಕ್ ಅಥವಾ ಖಾಸಗಿ ಹಣಕಾಸು ಸಂಸ್ಥೆಗಳಿಂದ ನಿಮಗೆ ಸಾಲದ ನೆರವು ಒದಗಿಸಿಕೊಡುತ್ತಾರೆ. ಇನ್ನು ನಿಮ್ಮ ಸಿಬಿಲ್ ಸಂಖ್ಯೆ ಕಡಿಮೆ ಇದ್ದರೂ ಸಹ ನಿಮ್ಮ ವಹಿವಾಟು ಪರಿಗಣಿಸಿ ಸಾಲದ ನೆರವು ಒದಗಿಸಲೂ ಪ್ರಯತ್ನಿಸಲಾಗುತ್ತದೆ.

‘ಕೃಷಿ ವ್ಯಾಪಾರಸ್ಥರು ಅಥವಾ ರೈತರು ಈ ಆ್ಯಪ್ ಡೌನ್‌ಲೋಡ್ ಮಾಡಿಕೊಂಡ ಬಳಿಕ ತಮ್ಮ ದೈನಂದಿನ ವಹಿವಾಟನ್ನು ಅದರಲ್ಲಿ ದಾಖಲಿಸಬೇಕು. ಇದಕ್ಕಾಗಿಯೇ ಆ್ಯಪ್‌ನಲ್ಲಿ ವ್ಯವಸ್ಥೆ ಕಲ್ಪಿಸಲಾಗಿದೆ. ಹೀಗೆ ತಮ್ಮ ವಹಿವಾಟು ದಾಖಲಿಸುವುದರಿಂದ ಸಿಬಿಲ್ ಸ್ಕೋರ್ ಹೆಚ್ಚಿಸಲು ನೆರವಾಗುತ್ತದೆ. ಕೃಷಿ ವ್ಯಾಪಾರಸ್ಥರು ಹೀಗೆ ಕೃಷಿ ಖಾತಾದಲ್ಲಿ ದಾಖಲಿಸಿರುವ ಅಂಕಿ ಅಂಶಗಳನ್ನು ಗಮನಿಸಿ ಅವರಿಗೆ ವಿಶೇಷ ಸ್ಕೋರ್ ಸಿದ್ಧಪಡಿಸಲಾಗುತ್ತದೆ. ಅವರ ವೈಯಕ್ತಿಕ ಸಿಬಿಲ್ ಮತ್ತು ಪ್ರತಿನಿತ್ಯದ ವಹಿವಾಟಿನ ಸ್ಕೋರ್ ಎರಡನ್ನೂ ಪರಿಗಣಿಸಿ ಅಗ್ರಿಫೈ ಸಂಸ್ಥೆಯು ವ್ಯಾಪಾರಸ್ಥರ ಪರವಾಗಿ ಬ್ಯಾಂಕ್ ಅಥವಾ ಖಾಸಗಿ ಹಣಕಾಸು ಸಂಸ್ಥೆಗಳ ಮುಂದೆ ಸಾಲಕ್ಕಾಗಿ ಅರ್ಜಿ ಸಲ್ಲಿಸಿ ಸಾಲ ಒದಗಿಸಲು ಸಹಾಯ ಮಾಡುತ್ತಾರೆ.’ ಎಂದು ಅಗ್ರಿನ್ನೋವ್ ಟೆಕ್ನಾಲಜೀಸ್ ಪ್ರೈ.ಲಿ. ಸಹ ಸ್ಥಾಪಕ ಕೆ.ಆರ್. ರಘುಚಂದ್ರ. ತಿಳಿಸಿದ್ದಾರೆ. ಇಡೀ ದೇಶದಲ್ಲಿ ಒಟ್ಟಾರೆ ಐದು ಮಿಲಿಯನ್ ವ್ಯಾಪಾರಸ್ಥರನ್ನು ಈ ವ್ಯವಸ್ಥೆಯಡಿ ತರುವ ಉದ್ದೇಶ ಹೊಂದಿದ್ದೇವೆ ಎಂದು ಅವರು ವಿವರಿಸಿದರು.

ನಿತ್ಯ ಕೃಷಿ ಮಾಹಿತಿ
‘ಕೃಷಿ ಖಾತಾ ಆ್ಯಪ್ ಮೂಲಕ ರೈತರಿಗೆ ಮತ್ತು ಟ್ರೇಡರ್ಸ್‌ಗಳಿಗೆ ಕೇವಲ ಸಾಲದ ನೆರವು ನೀಡುವುದಷ್ಟೇ ಅಲ್ಲದೆ, ರೈತರ ಅಗತ್ಯಕ್ಕೆ ತಕ್ಕಂತೆ ದೈನಂದಿನ ಮತ್ತು ತಾಂತ್ರಿಕ ಮಾಹಿತಿಗಳನ್ನೂ ಒದಗಿಸಲಾಗುವುದು. ಯಾವುದೇ ಜಿಲ್ಲೆ ಅಥವಾ ಹೋಬಳಿಯ ರೈತ ತನ್ನ ಜಮೀನು ಮತ್ತು ತಾನು ಬೆಳೆಯುವ ಬೆಳೆಯ ವಿವರವನ್ನು ದಾಖಲಿಸಿದರೆ ಅಲ್ಲಿ ಮಳೆ ಯಾವಾಗ ಬರುತ್ತದೆ, ಈ ವರ್ಷ ಯಾವ ಬೆಳೆ ಹೇಗೆ ಇಳುವರಿ ಕೊಡಬಹುದು, ಯಾವ ಬೆಳೆಗೆ ಮಾರುಕಟ್ಟೆಯ ದರ ಎಷ್ಟಿರಬಹುದು, ಮುಂದಿನ ಮೂರು ನಾಲ್ಕು ತಿಂಗಳಲ್ಲಿ ಬೇಡಿಕೆ ಸೃಷ್ಟಿಸುವಂತ ಧಾನ್ಯ ಅಥವಾ ತೋಟಗಾರಿಕಾ ಬೆಳೆ ಯಾವುವು, ಬೆಳೆಗೆ ತಗುಲಬಹುದಾದ ರೋಗದ ಮಾಹಿತಿ ಮತ್ತು ಅದಕ್ಕೆ ಪರಿಹಾರ ಹೀಗೆ ಹತ್ತು ಹಲವು ಪ್ರಯೋಜನಗಳನ್ನು ರೈತರೂ ಪಡೆದುಕೊಳ್ಳಬಹುದು’ ಅಗ್ರಿಫೈ ಸ್ಥಾಪಕ ಅಭಿಲಾಷ್ ತಿರುಪತಿ ಎಂದು ವಿವರಿಸಿದರು.

‘ರೈತ, ವ್ಯಾಪಾರಸ್ಥರಿಗೆ ಸಾಲದ ನೆರವು ಒದಗಿಸವಂತಹ ಯೋಜನೆಯನ್ನು ಸದ್ಯ ಕರ್ನಾಟಕ ಮತ್ತು ತಮಿಳುನಾಡಿನಲ್ಲಿ ಪ್ರಾರಂಭಿಸಲಾಗಿದೆ. ಈಗಾಗಲೇ ಕೊಪ್ಪಳ, ಬಳ್ಳಾರಿ, ಗದಗ ಮತ್ತು ಹಾವೇರಿ ಜಿಲ್ಲೆಯಲ್ಲಿ ಕೆಲವರು ಇದರ ಉಪಯೋಗ ಪಡೆದಿದ್ದಾರೆ. ಇಡೀ ದೇಶದಲ್ಲಿ ಒಟ್ಟಾರೆ ಐದು ಮಿಲಿಯನ್ ವ್ಯಾಪಾರಸ್ಥರನ್ನು ಈ ವ್ಯವಸ್ಥೆಯಡಿ ತರುವ ಉದ್ದೇಶ ಹೊಂದಲಾಗಿದೆ’ ಎಂದು ಮತ್ತೋರ್ವ ಸಹ ಸ್ಥಾಪಕ ಮಿತಿಲೇಶ್ ಕುಮಾರ್ ಹೇಳಿದರು.

Link to Suvarna news : https://kannada.asianetnews.com/business/how-agrifi-startup-will-help-farmers-to-get-loan-here-is-complete-detail-anu-r4vfp6

Link Udayavani news: https://www.udayavani.com/news-section/business-news/agrifi-a-agri-business-ledger